ADVERTISEMENT

ಬಂಟ್ವಾಳ | ಕಂಚಿಕಾರ ಪೇಟೆ: ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಅಂಗಡಿ ತ್ಯಾಜ್ಯ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 14:02 IST
Last Updated 2 ಜುಲೈ 2024, 14:02 IST
ಬಂಟ್ವಾಳ ಪುರಸಭೆ ವ್ಯಾಪ್ತಿಯ ಕಂಚಿಕಾರಪೇಟೆಯಲ್ಲಿ ಮೊಬೈಲ್ ಅಂಗಡಿಯ ಕಸ ಸುರಿದಿರುವ ದೃಶ್ಯ
ಬಂಟ್ವಾಳ ಪುರಸಭೆ ವ್ಯಾಪ್ತಿಯ ಕಂಚಿಕಾರಪೇಟೆಯಲ್ಲಿ ಮೊಬೈಲ್ ಅಂಗಡಿಯ ಕಸ ಸುರಿದಿರುವ ದೃಶ್ಯ   

ಬಂಟ್ವಾಳ: ಪುರಸಭೆ ವ್ಯಾಪ್ತಿಯ ಕಂಚಿಕಾರ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಅಂಗಡಿಯೊಂದರ ಕಸ ಮತ್ತು ಅಪಾಯಕಾರಿ ಟ್ಯೂಬ್ ಲೈಟ್ ತ್ಯಾಜ್ಯ ರಾಶಿ ಹಾಕಿರುವ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರು ನಗರ ಠಾಣೆಗೆ ದೂರು ನೀಡಿದ್ದಾರೆ.

ಪುರಸಭೆ ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್ ಅವರು ಸೋಮವಾರ ಕಸದ ರಾಶಿ ಪತ್ತೆ ಹಚ್ಚಿದ್ದು, ಅದರಲ್ಲಿ ಪ್ಲಾಸ್ಟಿಕ್ ಮತ್ತು ರಟ್ಟಿನ ಪೆಟ್ಟಿಗೆಗಳು ಕಂಡು ಬಂದಿವೆ. ಇನ್ನೊಂದೆಡೆ ಟ್ಯೂಬ್ ಲೈಟ್ ಕಸ ದೊರೆತಿದೆ. ಈ ಕಸದ ರಾಶಿಯಲ್ಲಿ ಹುಡುಕಾಡಿದಾಗ ಬಿ.ಸಿ.ರೋಡಿನ ಮೊಬೈಲ್ ಅಂಗಡಿಯೊಂದರ ಬಿಲ್‌ ಮತ್ತು ದೂರವಾಣಿ ಸಂಖ್ಯೆ ಪತ್ತೆಯಾಗಿದೆ. ಈ ಬಗ್ಗೆ ಮೊಬೈಲ್ ಅಂಗಡಿ ಮಾಲೀಕರಿಗೆ ಕರೆ ಮಾಡಿ ದಂಡ ಪಾವತಿಸುವಂತೆ ಸೂಚಿಸಿದಾಗ ಆತ ನಿರಾಕರಿಸಿದ್ದರಿಂದ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT