ADVERTISEMENT

ಕಡಲ ನಗರಿಯಲ್ಲಿ ಕನ್ನಡ ರಥಕ್ಕೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 4:24 IST
Last Updated 8 ನವೆಂಬರ್ 2024, 4:24 IST
<div class="paragraphs"><p>ಮಂಗಳೂರಿನ ಭೇಟಿ ನೀಡಿದ ಕನ್ನಡ ರಥವನ್ನು ಸ್ಥಳೀಯ ಮುಖಂಡರು, ಅಧಿಕಾರಿಗಳು ಸ್ವಾಗತಿಸಿದರು</p></div>

ಮಂಗಳೂರಿನ ಭೇಟಿ ನೀಡಿದ ಕನ್ನಡ ರಥವನ್ನು ಸ್ಥಳೀಯ ಮುಖಂಡರು, ಅಧಿಕಾರಿಗಳು ಸ್ವಾಗತಿಸಿದರು

   

ಪ್ರಜಾವಾಣಿ ಚಿತ್ರ 

ಮಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಭೇಟಿ ನೀಡಿತು.

ADVERTISEMENT

ಜಿಲ್ಲಾಡಳಿತ ವತಿಯಿಂದ ನಗರದ ಪುರಭವನದ ಆವರಣದಲ್ಲಿ ರಥವನ್ನು ಸ್ವಾಗತಿಸಲಾಯಿತು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ ಲೋಕದಲ್ಲಿ ಆಳವಾದ ಬೇರನ್ನು ಹೊಂದಿದೆ. ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ’ ಎಂದರು.

ಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವಂತಾಗಲು ಕನ್ನಡ ಸಾಹಿತ್ಯ ಪರಿಷತ್ ಮುಖಂಡರು ಪ್ರಯತ್ನಿಸಬೇಕು. ಜಿಲ್ಲೆಯಲ್ಲಿ ಸಮ್ಮೇಳನ ನಡೆದರೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ ಇದ್ದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಕನ್ನಡ ರಥಯಾತ್ರೆ ಸಂಚಾರದ ಮಾಹಿತಿ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್ ರೇವಣಕರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.