ADVERTISEMENT

ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 8:36 IST
Last Updated 23 ನವೆಂಬರ್ 2024, 8:36 IST
   

ಮಂಗಳೂರು: ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಪಕ್ಷದ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂಗಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ ಎಂದರು.

ADVERTISEMENT

ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.