ADVERTISEMENT

ಮಂಗಳೂರು: ಭಾರಿ ಮಳೆಯಿಂದಾಗಿ ಶೆಡ್ ಮೇಲೆ ಗುಡ್ಡ ಕುಸಿತ, ಮೂವರು ಕಾರ್ಮಿಕರ ಸಾವು

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 10:36 IST
Last Updated 7 ಜುಲೈ 2022, 10:36 IST
   

ಮಂಗಳೂರು: ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದ ಪರಿಣಾಮ, ಶೆಡ್‌ನೊಳಗೆಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಟ್ವಾಳ ತಾಲ್ಲೂಕು ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬುವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಶೆಡ್‌ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿತ್ತು. ಒಬ್ಬರು ಮೃತಪಟ್ಟಿದ್ದರು.

ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ADVERTISEMENT

ಪಾಲಕ್ಕಾಡು ನಿವಾಸಿ ಬಿಜು (44) ಬುಧವಾರ ರಾತ್ರಿ ಮೃತಪಟ್ಟವರು.ಬಾಬು (46), ಸಂತೋಷ್ ಅಲ್ಫೊನ್ಸಾ (46) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರ್ಕರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್‌‌ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ಉಪ‌ವಿಭಾಗಾಧಿಕಾರಿ ಮದನ್ ಮೋಹನ್ ,ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂ ಸ್ಥಳಕ್ಕೆ ಭೇಟಿ ನೀಡಿದರು.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.