ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕಿನ ಕೊಲ್ಲಮೊಗ್ರು ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಕೊಲ್ಲಮೊಗ್ರು ಪೇಟೆ ಸಮೀಪದ ಸೇತುವೆ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.
ಕೊಲ್ಲಮೊಗ್ರು ಗ್ರಾಮದ ಮಾಯಿಲಕೋಟೆ, ಕಡಂಬಳ ಪ್ರದೇಶಗಳಲ್ಲಿ ಸಂಜೆ 5 ರಿಂದ 6.30 ರವರೆಗೆ ಧಾರಾಕಾರ ಮಳೆಯಾಗಿದೆ. ಆ ಪ್ರದೇಶದ ಹೊಳೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದ ಪರಿಣಾಮ ಸೇತುವೆ ಮುಳುಗಡೆಯಾಗಿದೆ. ಈ ಪ್ರದೇಶದ ತೋಟ, ರಸ್ತೆಗಳಿಗೂ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಸುಳ್ಯ ತಾಲ್ಲೂಕಿನ ಹಲವೆಡೆ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.