ADVERTISEMENT

ಕುಕ್ಕೆ ಸುಬ್ರಹ್ಮಣ್ಯ: ನದಿ ನೀರಿಗಿಳಿಯದಂತೆ ಭಕ್ತರಿಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:54 IST
Last Updated 28 ಜೂನ್ 2024, 15:54 IST
ನೀರಿನ ಮಟ್ಟ ಇಳಿಕೆಯಾಗಿರುವುದು
ನೀರಿನ ಮಟ್ಟ ಇಳಿಕೆಯಾಗಿರುವುದು   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಶುಕ್ರವಾರ ಮಳೆ ಬಿಡುವು ನೀಡಿದ್ದು, ಬಿಸಿಲ ವಾತಾವರಣ ಕಂಡು ಇತ್ತು. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ.

ನಿರಂತರ ಮಳೆಗೆ ಗುರುವಾರ ಬೆಳಿಗ್ಗೆಯಿಂದಲೇ ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಇಲ್ಲಿನ ಕಿಂಡಿಅಣೆಕಟ್ಟು, ಸ್ನಾನ ಘಟ್ಟ ಮುಳುಗಡೆಯಾಗಿತ್ತು. ಸಂಜೆ ವೇಳೆಗೆ ನೀರಿನ ಮಟ್ಟ ಅಲ್ಪ ಇಳಿಕೆಯಾಗಿತ್ತು.

ನೀರಿಗಿಳಿಯಲು ನಿರ್ಬಂಧ: ಕುಮಾರಧಾರ ನದಿಯ ಸ್ನಾನ ಘಟ್ಟದಲ್ಲಿ ನೀರಿನ ಮಟ್ಟ ಕಡಿಮೆ ಆಗಿದ್ದರೂ ಜಿಲ್ಲಾಧಿಕಾರಿ ಸೂಚನೆಯಂತೆ ಭಕ್ತರು ನದಿಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ. ನದಿ ತೀರದಲ್ಲಿ ದೇವಳದ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.