ADVERTISEMENT

ದೃಢ ಸಂಕಲ್ಪದಿಂದ ಸಾರ್ಥಕ ಜೀವನ ನಡೆಸಿ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 14:34 IST
Last Updated 9 ಅಕ್ಟೋಬರ್ 2024, 14:34 IST
ಬೆಳಾಲು ಗ್ರಾಮದಲ್ಲಿರುವ ಎಸ್.ಡಿ.ಎಂ. ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು
ಬೆಳಾಲು ಗ್ರಾಮದಲ್ಲಿರುವ ಎಸ್.ಡಿ.ಎಂ. ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು   

ಉಜಿರೆ: ‘ಪರಿವರ್ತನೆ ಜಗದ ನಿಯಮ. ಮದ್ಯವರ್ಜನ ಶಿಬಿರದಲ್ಲಿ ಮನಪರಿವರ್ತನೆ ಮೂಲಕ ಶಿಬಿರಾರ್ಥಿಗಳನ್ನು ವ್ಯಸನ ಮುಕ್ತರನ್ನಾಗಿ ಮಾಡಲಾಗುತ್ತದೆ. ದೃಢಸಂಕಲ್ಪದಿಂದ ಮುಂದೆ ಅವರು ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಬೆಳಾಲು ಗ್ರಾಮದ ಎಸ್‌ಡಿಎಂ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದಲ್ಲಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ, ವಿವೇಕ್ ಪಾಯಸ್, ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಭಾಗವಹಿಸಿದ್ದರು.

ADVERTISEMENT

ದೇವಿಪ್ರಸಾದ್, ಆದಂ ಖಾನ್, ಗಣೇಶ್ ಗೌಡ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಶ್ರೀನಿವಾಸ ಗೌಡ ಸ್ವಾಗತಿಸಿದರು. ಯೋಜನಾಧಿಕಾರಿ ಸುರೇಂದ್ರ ಕುಮಾರ್ ವಂದಿಸಿದರು. ಕೃಷಿ ಅಧಿಕಾರಿ ರಾಮ್ ಕುಮಾರ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.