ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ನಿರ್ಮಿಸಲು ಉದ್ದೇಶಿಸಿರುವ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ಸಿದ್ಧತೆ ನಡೆಯುತ್ತಿದ್ದಾಗ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಜಮಾಯಿಸಿದ ಬಿಜೆಪಿ ಬೆಂಬಲಿಗರು, ಸಂಘ ಪರಿವಾರದ ಕಾರ್ಯಕರ್ತರು ಹಾಗೂ ಉಳ್ಳಾಲ ಕೌನ್ಸಿಲರ್ ದಿನಕರ ಉಳ್ಳಾಲ ನೇತೃತ್ವದ ಅಬ್ಬಕ್ಕ ಉತ್ಸವ ಸಮಿತಿಯವರು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.
ಅಬ್ಬಕ್ಕ ಭವನ ವಿಳಂಬ ಹಿನ್ನೆಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ಈ ಮಧ್ಯೆ ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕ, ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರಿಗೆ ಕಾರ್ಯಕ್ರಮಕ್ಕೆ ತೆರಳದಂತೆ ಪ್ರತಿಭಟನಕಾರರು ಮನವಿ ಮಾಡಿದರು.
ಇದೊಂದು ಸರ್ಕಾರಿ ಕಾರ್ಯಕ್ರಮವಾದ ಕಾರಣ ಹಾಜರಾಗುವುದು ಅನಿವಾರ್ಯ ಎಂದ ಖಾದರ್ ಬಳಿಕ ನಡೆದ ಶಿಲಾನ್ಯಾಸ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಶಾಸಕರು ಹಾಗೂ ಪ್ರತಿಭಟನನಕಾರರ ನಡುವೆ ತೀವ್ರ ವಾಗ್ವಾದ ನಡೆಯಿತು.
ಬಿಜೆಪಿ ಸರ್ಕಾರವೇ ಇರುವಾಗ, ಬಿಜೆಪಿ ಕಾರ್ಯಕರ್ತರೇ ಸೇರಿಕೊಂಡು ಪ್ರತಿಭಟಿಸುತ್ತಿರುವುದು ಹಾಸ್ಯಾಸ್ಪದ ಎಂದು ಖಾದರ್ ಹೇಳಿದರು.
ಪ್ರತಿಭಟಿಸುವ ಬದಲು, ತಮ್ಮ ಸರ್ಕಾರದ ಮೂಲಕ ಯೋಜನೆಯನ್ನು ನಿಲ್ಲಿಸಬಹುದಲ್ಲಾ ಶಾಸಕ ಯು.ಟಿ ಖಾದರ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವರೆ ಶಿಲಾನ್ಯಾಸ ನೆರವೇರಿಸಬೇಕಿದ್ದರೂ, ಅವರು ಗೈರು ಹಾಜರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.