ಮಂಗಳೂರು: ಗುದದ್ವಾರದಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಕ್ಕೆ ಪಡೆದು, 24 ಕ್ಯಾರೆಟ್‌ನ ಒಟ್ಟು 729 ಗ್ರಾಂ ಚಿನ್ನವನ್ನು ಆತನಿಂದ ಸ್ವಾಧೀನಪಡಿಸಿಕೊಂಡಿದ್ದಾರೆ.
ದುಬೈನಿಂದ ವಿಮಾನದ ಮೂಲಕ ಪ್ರಯಾಣಿಸಿದ್ದ ಕಾಸರಗೋಡಿನ ಪ್ರಯಾಣಿಕನನ್ನು ಲೋಹಶೋಧಕದಿಂದ ಭಾನುವಾರ ತಪಾಸಣೆ ನಡೆಸಿದಾಗ ಬೀಪ್ ಶಬ್ದ ಬಂದಿತ್ತು. ಆತನನ್ನು ಕೂಲಂಕಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಗುದದ್ವಾರದಲ್ಲಿ ಅಂಡಾಕಾರದ ಮೂರು ಗುಳಿಗೆಗಳು ಪತ್ತೆಯಾದವು. ಅವುಗಳಲ್ಲಿ ಒಟ್ಟು 729 ಗ್ರಾಂ ಚಿನ್ನ ಪತ್ತೆಯಾಗಿದ್ದು, ಅದರ ಮೌಲ್ಯ ₹ 45.92 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.