ಸುಳ್ಯ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಐವರ್ನಾಡಿನಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ.
ಸುಧಾಕರ ಅವರು ಮನೆಯಲ್ಲಿ ಮಲಗಿದ್ದರು. ಅವರ ಪತ್ನಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಸುಟ್ಟು ಹಾಕಿತ್ತು.
ಸುಧಾಕರ ಅವರು ಸ್ವಲ್ಪ ಅಸೌಖ್ಯಕ್ಕೀಡಾಗಿರುವ ಹಿನ್ನಲೆಯಲ್ಲಿ ಅವರಿಗೆ ಹೊರಗೆ ಓಡಲು ಸಾಧ್ಯವಾಗಲಿಲ್ಲ. ಬೆಂಕಿಯಲ್ಲಿ ದಹಿಸಲ್ಪಟ್ಟು ಮೃತಪಟ್ಟರು ಎಂದು ತಿಳಿದು ಬಂದಿದೆ.
ಮನೆಯೊಳಗೆ ಉರಿಸಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.