ಮಂಗಳೂರು: ಇತ್ತೀಚಿನ ದಿನಗಳಲ್ಲಿ ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅಭಿಪ್ರಾಯಪಟ್ಟರು.
ಸೋಮವಾರ ನಗರದ ಬಂಟ್ಸ್ ಹಾಸ್ಟೆಲ್ ರಸ್ತೆಯಲ್ಲಿರುವ ತಪೋವನ' ಆರೋಗ್ಯ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
ಆಯುರ್ವೇದ ಚಿಕಿತ್ಸೆ ಉತ್ತಮವಾದ ಚಿಕಿತ್ಸಾ ಪದ್ಧತಿಯಾಗಿದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೂಡ ಆರೋಗ್ಯಕ್ಕೆ ಹಾಗೂ ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಹತ್ವ ನೀಡಿದ್ದಾರೆ ಎಂದರು.
ಬೇರೆ ಯಾವುದೇ ರೀತಿಯ ಅಡ್ಡಪರಿಣಾಮಗಳಿಲ್ಲದ ಆಯುರ್ವೇದಿಕ್ ಚಿಕಿತ್ಸೆ ಜನರಿಗೆ ಈ ಆರೋಗ್ಯ ಕೇಂದ್ರದಲ್ಲಿ ದೊರೆಯಲಿದ್ದು, ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಬೇಕು ಎಂದರು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ತಪೋವನ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಹರ್ಷ ಹೆಬ್ಬಾರ್, ಡಾ. ದೇವಿಕೃಪಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.