ADVERTISEMENT

ಫೀನಿಕ್ಸ್‌ನಂತೆ ಹೊರಹೊಮ್ಮಲಿದೆ ಕಾಂಗ್ರೆಸ್‌: ರಮಾನಾಥ ರೈ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 3:12 IST
Last Updated 16 ಫೆಬ್ರುವರಿ 2024, 3:12 IST

ಮಂಗಳೂರು: ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇದೇ 17ರಂದು ನಡೆಯುವ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಫೀನಿಕ್ಸ್‌ನಂತೆ ಹೊರಹೊಮ್ಮಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಹೇಳಿದರು.

ಪ‍ತ್ರಿಕಾಗೋಷ್ಠಿಯಲ್ಲಿ ಇಲ್ಲಿ ಗುರುವಾರ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಸಂಘ ಪರಿವಾರದವರು ಜಿಲ್ಲೆಯನ್ನು  ಮತೀಯವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಅವರ ಅಪಪ್ರಚಾರದಿಂದಾಗಿ ಜಿಲ್ಲೆಯಲ್ಲಿ ಪಕ್ಷಕ್ಕೆ ಕೊಂಚ ಹಿನ್ನಡೆಯಾಗಿದ್ದು ನಿಜ. ಆದರೆ, ಅವರಿಗೆ ತಕ್ಕ ಉತ್ತರ ನೀಡಲು ಪಕ್ಷವು ಸಶಕ್ತವಾಗಿದೆ’ ಎಂದರು.

‘ಬಡವರ ಪರ ಕಾರ್ಯಕ್ರಮಗಳು ಜಾರಿಯಾಗಿದ್ದರೆ ಅದು ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ. ಕಾಂಗ್ರೆಸ್‌ನ ಕಾರ್ಯಕ್ರಮಗಳ ಪ್ರಯೊಜನ ಪಡೆದವರು ಈ ಸಮಾವೇಶವನ್ನು ಯಶಸ್ವಿಗೊಳಿಸಲಿದ್ದಾರೆ’ ಎಂದರು.

ADVERTISEMENT

ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್‌, ಪ್ರಧಾನ ಕಾರ್ಯದರ್ಶಿಗಳಾದ ಆರ್‌.ಎಸ್‌.ಸತ್ಯನಾರಾಯಣ, ಕೃಪಾ ಆಳ್ವ, ಮಮತಾ ಗಟ್ಟಿ, ಪದ್ಮರಾಜ್‌ ಆರ್‌., ಮಹಮ್ಮದ್‌ ಗಫೂರ್‌, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕೊಡವೂರು, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೊ,  ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ವಿಶ್ವಾಸ್‌ ಕುಮಾರ್‌ ದಾಸ್, ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಸವಾದ್‌,  ಪಾಲಿಕೆ ಸದಸ್ಯರಾದ ಭಾಸ್ಕರ್‌ ರೈ, ಶಶಿಧರ ಹೆಗ್ಡೆ,  ನವೀನ್‌ ಡಿಸೋಜ, ಯು.ಟಿ.ಫರ್ಝಾನ, ತೇಜಸ್ವಿ, ಮುಖಂಡರಾದ ನಜೀರ್‌ ಬಜಾಲ್‌, ನಿತ್ಯಾನಂದ ಶೆಟ್ಟಿ, ಸಫ್ವಾನ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.