ADVERTISEMENT

ಮಂಗಳೂರು ದಸರಾ: ಮೈಸೂರು, ಬೆಂಗಳೂರು, ಕಾರವಾರ ನಡುವೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 13:43 IST
Last Updated 4 ಅಕ್ಟೋಬರ್ 2024, 13:43 IST
Train
Train   

ಮಂಗಳೂರು: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

06569 ಸಂಖ್ಯೆಯ ರೈಲು ಇದೇ 10ರಂದು ಮಧ್ಯರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡಲಿದ್ದು 11ರಂದು ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06570 ಸಂಖ್ಯೆಯ ರೈಲು 11ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ 4.40ಕ್ಕೆ ಮೈಸೂರು ತಲುಪಲಿದೆ.

ಯಶವಂತಪುರದಿಂದ ಹೊರಡುವ ರೈಲಿಗೆ ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್‌, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲದಲ್ಲಿ ನಿಲುಗಡೆ ಇದೆ. 06570 ಸಂಖ್ಯೆಯ ರೈಲಿಗೆ ಯಶವಂತಪುರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಮಂಡ್ಯ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆ ಇದೆ ಎಂದು ತಿಳಿಸಲಾಗಿದೆ.

ADVERTISEMENT

06585 ಸಂಖ್ಯೆಯ ಮೈಸೂರು–ಕಾರವಾರ ಎಕ್ಸ್‌ಪ್ರೆಸ್‌ ಇದೇ 12ರಂದು ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು ಮರುದಿನ ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06586 ಸಂಖ್ಯೆಯ ಕಾರವಾರ–ಮೈಸೂರು ಎಕ್ಸ್‌ಪ್ರೆಸ್‌ 13ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. ಮಂಡ್ಯ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಂಕ್ಷನ್‌, ಯಶವಂತಪುರ, ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್‌, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್‌ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್‌ ಮತ್ತು ಅಂಕೋಲದಲ್ಲಿ ನಿಲುಗಡೆ ಇದ್ದು ಇದೇ 5ರಂದು ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.