ADVERTISEMENT

ಮಂಗಳೂರು | ಜೆರೋಸಾ ಶಾಲೆ ಪ್ರಕರಣ: ವಿಚಾರಣೆ ಆರಂಭಿಸಿದ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2024, 12:02 IST
Last Updated 19 ಫೆಬ್ರುವರಿ 2024, 12:02 IST
<div class="paragraphs"><p>ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌</p></div>

ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌

   

ಮಂಗಳೂರು: ನಗರದ ಸೇಂಟ್‌ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಸೋಮವಾರ ವಿಚಾರಣೆ ಆರಂಭಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದ ಒಟ್ಟು ಬೆಳವಣಿಗೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಅವರು ಸೋಮವಾರ ಪ್ರಾಥಮಿಕ ಮಾಹಿತಿ ಕಲೆಹಾಕಿದರು. ಇಲಾಖೆಯ ಒಬ್ಬೊಬ್ಬ ಅಧಿಕಾರಿಯನ್ನು ಪ್ರತ್ಯೇಕವಾಗಿ ಕರೆಯಿಸಿಕೊಂಡು ವಿಚಾರಣೆ ನಡೆಸಿದರು.

ADVERTISEMENT

ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣದ ಸತ್ಯಶೋಧನೆ ಪ್ರಕ್ರಿಯೆಯನ್ನು ಆರಂಭಿಸಿದ್ದೇನೆ. ಬೆಳಿಗ್ಗೆ 10ರಿಂದ ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಕಲೆಹಾಕಿದ್ದೇನೆ. ಇನ್ನಷ್ಟು ಮಾಹಿತಿ ಕಲೆ ಹಾಕಬೇಕಿದೆ. ಈ ಹಂತದಲ್ಲಿ ವಿಚಾರಣೆ ಕುರಿತು ಏನನ್ನೂ ಹೇಳಲು ಇಷ್ಟಪಡುವುದಿಲ್ಲ. ತನಿಖೆಗೆ ಎಲ್ಲರೂ ಸಂಪೂರ್ಣ ಸಹಕಾರ ಕೊಡಬೇಕು’ ಎಂದರು.

‘ಎರಡು ದಿನಗಳು ಇಲ್ಲೇ ಇದ್ದು, ವಿಚಾರಣೆ ಪೂರ್ಣಗೊಳಿಸಿ ಆದಷ್ಟು ಬೇಗ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿ ವಸ್ತುನಿಷ್ಠ ವರದಿ ಸಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.