ADVERTISEMENT

ಮಂಗಳೂರು ಮಹಾನಗರ ಪಾಲಿಕೆ: ಕಮಿಷನರ್ ಮತ್ತೆ ಬದಲು!

​ಪ್ರಜಾವಾಣಿ ವಾರ್ತೆ
Published 20 ಜೂನ್ 2023, 4:46 IST
Last Updated 20 ಜೂನ್ 2023, 4:46 IST
ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು ಮಹಾನಗರ ಪಾಲಿಕೆ    

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಹುದ್ದೆಗೆ ಬಳ್ಳಾರಿ‌ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನ್ಸೂರ್ ಅಲಿ ಅವರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು.

ಈ ಆದೇಶವನ್ನು ಮಾರ್ಪಡಿಸಿ ಮನ್ಸೂರ್ ಅಲಿ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆಗೆ ವರ್ಗಾಯಿಸಲಾಗಿದೆ.

ನಗರಾಭಿವೃದ್ಧಿ ಪ್ರಾಧಿಕಾರದ ಆಯಕ್ತರಾಗಿದ್ದ ಡಾ. ಭಾಸ್ಕರ್ ಎನ್ ಅವರಿಗೆ ಸಕ್ಷಮ‌ ಪ್ರಾಧಿಕಾರದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ADVERTISEMENT

ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಚನ್ನಬಸಪ್ಪ ಕೆ ಅವರು ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡ ಮೇಲೆ ಈ ಸ್ಥಾನ ತೆರವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.