ADVERTISEMENT

ಪ್ರಚೋದನಾಕಾರಿ ಹೇಳಿಕೆ: ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 9:15 IST
Last Updated 10 ಜುಲೈ 2024, 9:15 IST
<div class="paragraphs"><p>ಡಾ.ವೈ.ಭರತ್ ಶೆಟ್ಟಿ</p></div>

ಡಾ.ವೈ.ಭರತ್ ಶೆಟ್ಟಿ

   

ಮಂಗಳೂರು: ಕಾವೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಪಾಲಿಕೆ ಸದಸ್ಯ ಅನಿಲ್ ಕುಮಾರ್‌ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353ರ ಅಡಿ ಡಾ.ವೈ ಭರತ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ‘ ಎಂದು ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್‌ ತಿಳಿಸಿದ್ದಾರೆ.

ADVERTISEMENT

‘ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂಗಳ ಕುರಿತುಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಕಾವೂರಿನಲ್ಲಿ ಸೋಮವಾರ ಪ್ರತಿಭಟನೆ ಏರ್ಪಡಿಸಿತ್ತು. ಅಲ್ಲಿ ಡಾ.ಭರತ್ ಶೆಟ್ಟಿ, ‘ಪಾರ್ಲಿಮೆಂಟ್‌ ಒಳಗೆ ಹೋಗಿ ಯಾರಾದರೂ ರಾಹುಲ್‌ ಗಾಂಧಿ ಕೆನ್ನೆಗೆ ಎರಡು ಬಾರಿಸಿದರೆ ಒಳ್ಳೆಯದಿತ್ತು. ಅವನಿಗೆ ಎರಡು ಕೊಟ್ಟರೆ ಸರಿಯಾಗುತ್ತಿತ್ತು’ ಎಂದು ಹೇಳಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.