ADVERTISEMENT

ಮಂಗಳೂರು: ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ- ಮಣ್ಣಿನಡಿ ಕಾರ್ಮಿಕರು

ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು, ಒಬ್ಬನ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 10:05 IST
Last Updated 3 ಜುಲೈ 2024, 10:05 IST
<div class="paragraphs"><p>ಮಂಗಳೂರು: ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ- ಮಣ್ಣಿನಡಿ ಕಾರ್ಮಿಕರು</p></div>

ಮಂಗಳೂರು: ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ- ಮಣ್ಣಿನಡಿ ಕಾರ್ಮಿಕರು

   

ಮಂಗಳೂರು: ಮಂಗಳೂರು ನಗರದ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ತಳಪಾಯಕ್ಕೆ ತೆಗೆದ ಗುಂಡಿಯ ಪಕ್ಕದ ಮಣ್ಣು ಬುಧವಾರ ಮಧ್ಯಾಹ್ನ ಕುಸಿದು ಕಾರ್ಮಿಕರಿಬ್ಬರು ಅದರಡಿ ಸಿಲುಕಿದ್ದರು.‌ ಅವರಲ್ಲಿ ಒಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದೆ. ಇನ್ನೊಬ್ಬನ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.

ರೋಹನ್ ಸ್ಯೂಟ್ಸ್ ಕಮರ್ಷಿಯಲ್ ಆ್ಯಂಡ್ ಫುಲ್ಲಿ ಫರ್ನಿಷ್ಡ್ ಸ್ಟುಡಿಯೊ ಅಪಾರ್ಟ್ಮೆಂಟ್ಸ್ ಕಟ್ಟಡದ ತಳಪಾಯದ ಪಿಲ್ಲರ್ ಪಕ್ಕದಲ್ಲಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸುವ ಕೆಲಸ ನಡೆಯುತ್ತಿತ್ತು. ಬಿಹಾರದ ರಾಜ್ ಕುಮಾರ್ (18) ಹಾಗೂ ಉತ್ತರ ಪ್ರದೇಶದ ಚಂದನ್ ಕುಮಾರ್ (30) ಕೆಲಸದಲ್ಲಿ ನಿರತರಾಗಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಣ್ಣು ಕುಸಿದು ಅವರಿಬ್ಬರು ಅದರಡಿ ಸಿಲುಕಿದ್ದರು.

ADVERTISEMENT

ರಾಜ್ ಕುಮಾರ್ ಅವರನ್ನು ರಕ್ಷಿಸಲಾಗಿದೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಚಂದನ್ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.