ADVERTISEMENT

ಅಡಿಕೆ ಎಲೆ ಹಳದಿ ರೋಗ; ಮತ್ತೊಮ್ಮೆ ಕೇಂದ್ರಕ್ಕೆ ಮನವಿ: ವಿರೇಂದ್ರ ಹೆಗ್ಗಡೆ

ಡಿ.ವೀರೇಂದ್ರ ಹೆಗ್ಗಡೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2023, 13:49 IST
Last Updated 3 ಅಕ್ಟೋಬರ್ 2023, 13:49 IST
ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವಿರೇಂದ್ರ ಹೆಗ್ಗಡೆ ಅವರು ಮಾತನಾಡಿದರು
ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವಿರೇಂದ್ರ ಹೆಗ್ಗಡೆ ಅವರು ಮಾತನಾಡಿದರು   

ಸುಳ್ಯ: ‘ಅಡಿಕೆ ಎಲೆ ಹಳದಿ ರೋಗದ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೇನೆ. ಅದಕ್ಕೆ ಉತ್ತರವೂ ಬಂದಿದೆ. ಮತ್ತೊಮ್ಮೆ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವಿರೇಂದ್ರ ಹೆಗ್ಗಡೆ ಹೇಳಿದರು.

ಸುಳ್ಯದ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಜರುಗಿದ ಗಾಂಧಿಸ್ಮತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಳ್ಯ ತಾಲ್ಲೂಕಿನಲ್ಲಿರುವ ಅಡಿಕೆ ಎಲೆ ಹಳದಿ ರೋಗದ ವಿಚಾರವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಜನಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರರ ನೇತೃತ್ವದಲ್ಲಿ ಸಲ್ಲಿಸಿದ ಮನವಿಗೆ ಅವರು ಪ್ರತಿಕ್ರಿಯಿಸಿದರು

ADVERTISEMENT

ದುಶ್ಚಟಗಳು ಮನುಷ್ಯನನ್ನು ಆವರಿಸಿದರೆ ಆತನ ಜೀವನ, ಆರೋಗ್ಯ, ಸಂಸಾರ, ಆರ್ಥಿಕ ವ್ಯವಸ್ಥೆ ಹಾಳಾಗುತ್ತದೆ. ಅಂಥವರನ್ನು ನಿರಂತರವಾಗಿ ಎಚ್ಚರಿಸಿ, ದುಶ್ಚಟದಿಂದ ದೂರ ಇರುವಂತೆ ಎಚ್ಚರಿಸುವ ಕೆಲಸವನ್ನು ಜನಜಾಗೃತಿ ವೇದಿಕೆ ಮಾಡುತ್ತಿದೆ ಎಂದರು.

ಆಶೀರ್ವಚನ ನೀಡಿದ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಹಂಸ ಸ್ವಾಮೀಜಿ, ದೇಶ ದುಶ್ಚಟಮುಕ್ತ ಆಗಬೇಕು. ಸ್ವಸ್ಥ ಸಮಾಜ ನಿರ್ಮಾಣ ಆಗಬೇಕು ಎಂಬ ಮಹಾತ್ಮ ಗಾಂಧಿ ಅವರ ಕನಸು ನನಸು ಮಾಡುವ ಕೆಲಸ ಧರ್ಮಸ್ಥಳದ ಮೂಲಕ ನಡೆಸಲಾಗುತಿದೆ ಎಂದರು,

ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶ ಉದ್ಘಾಟಿಸಿದರು.

ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್‌ನ ಧರ್ಮಗುರು ಫಾ.ವಿಕ್ಟರ್ ಡಿಸೋಜ ಸಂದೇಶ ನೀಡಿದರು.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಶಂಕರಪ್ಪ ಮಾತನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಾಜಣ್ಣ ಮೂ.ಕೊರವಿ ಸಾಧಕರನ್ನು ಸನ್ಮಾನಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್, ಹುಬ್ಬಳ್ಳಿಯ ನೆಹರೂ ಆರ್ಟ್ಸ್ ಸೈನ್ಸ್ ಕಾಮರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಯೂಸುಫ್ ಪೈಚಾರು, ಮುಂಬೈ ಉದ್ಯಮಿ ಆರ್.ಬಿ.ಹೆಬ್ಬಳ್ಳಿ, ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ತಾಲ್ಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂರು, ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಉಡುಪಿ ಕರಾವಳಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ನಾಗೇಶ್ ಪಿ., ಮಹೇಶ್ ಕುಮಾರ್ ರೈ ಮೇನಾಲ, ಸಾಜ ರಾಧಾಕೃಷ್ಣ ಆಳ್ವ, ರೊನಾಲ್ಡ್ ಡಿಸೋಜ, ಸತೀಶ್ ಹೊನ್ನಳ್ಳಿ, ನವೀನ್ ಚಂದ್ರ, ಸಂತೋಷ್ ಕೇನ್ಯ, ಉದಯಕುಮಾರ್, ಯತೀಶ್ ರೈ ದುಗ್ಗಲಡ್ಕ, ಲೋಕೇಶ್ ಹೆಗ್ಡೆ, ಮಹೇಶ್ ಕೆ, ಜಯಪ್ರಕಾಶ್ ಇದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಸ್ ಸ್ವಾಗತಿಸಿ, ನಿರ್ದೇಶಕ ಪ್ರವೀಣ್‌ಕುಮಾರ್ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಹಾಗೂ ಪೂಜಾಶ್ರೀ ಪೈಚಾರು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.