ADVERTISEMENT

ವಿಧಾನ ಪರಿಷತ್ ಉಪ ಚುನಾವಣೆ: ಐವರಿಂದ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 19:05 IST
Last Updated 3 ಅಕ್ಟೋಬರ್ 2024, 19:05 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

(ಸಾಂದರ್ಭಿಕ ಚಿತ್ರ)

ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪ ಚುನಾವಣೆಗೆ ಒಟ್ಟು ಐವರು ನಾಮಪತ್ರ ಸಲ್ಲಿಸಿದ್ದಾರೆ.

ADVERTISEMENT

ಕಿಶೋರ್‌ ಬಿ.ಆರ್ (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದತ್ ಎಸ್. ಮತ್ತು ಮುಹಮ್ಮದ್ ರಿಯಾಝ್ (ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಅವರು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ಉಮೇದುವಾರಿಕೆ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಒಟ್ಟು ಐವರು ಅಭ್ಯರ್ಥಿಗಳಿಂದ ಎಂಟು ನಾಮಪತ್ರಗಳು ಸಲ್ಲಿಕೆಯಾಗಿವೆ.

ಅ.4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಹಿಂಪಡೆಯಲು ಅ.7 ಕೊನೆಯ ದಿನ. ಅ. 21ರಂದು ಮತದಾನ, 24ರಂದು ಮತ ಎಣಿಕೆ ನಡೆಯಲಿದೆ.

ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.