ADVERTISEMENT

ದಕ್ಷಿಣ ಕನ್ನಡ: ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 14:30 IST
Last Updated 25 ಜೂನ್ 2024, 14:30 IST
ಮಳೆ
ಮಳೆ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಸೋಮವಾರ ರಾತ್ರಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನ ಬಳಿಕ ಜಿಲ್ಲೆಯಾದ್ಯಂತ ಅರ್ಧ ಗಂಟೆ ಸಾಧಾರಣ ಮಳೆಯಾಗಿದೆ.

ಪಶ್ಚಿಮ ಘಟ್ಟದಲ್ಲಿ ಹಾಗೂ ಜಿಲ್ಲೆಯಲ್ಲಿ ವಾರದಿಂದ ಈಚೆಗೆ  ವ್ಯಾಪಕ ಮಳೆಯಾಗಿದ್ದರಿಂದ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಫಲ್ಗುಣಿ, ನಂದಿನಿ, ಶಾಂಭವಿ ಹಾಗೂ ಕುಮಾರಧಾರ ನದಿಗಳಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿದೆ.  

ಇದೇ 26 ಹಾಗೂ 27ರಂದು ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.