ADVERTISEMENT

ಉಜಿರೆ: ಒಟ್ಟಿಗಿದ್ದ ಯುವಕ– ಯುವತಿಗೆ ತರಾಟೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2024, 6:19 IST
Last Updated 17 ಜನವರಿ 2024, 6:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಜೊತೆಯಲ್ಲಿ ಓಡಾಡುತ್ತಿದ್ದ ಬೆಂಗಳೂರಿನ ಮುಸ್ಲಿಂ ಯುವಕ– ಹಿಂದೂ ಯುವತಿಯನ್ನು ಸ್ಥಳೀಯ ಕೆಲ ಸಾರ್ವಜನಿಕರು ತಡೆದು ಪ್ರಶ್ನಿಸಿದ್ದಾರೆ. ಅವರಿಬ್ಬರು ಒಟ್ಟಿಗೆ ತಿರುಗಾಡುತ್ತಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಸ್ಥಳೀಯ ಆಟೊರಿಕ್ಷಾ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕ– ಯುವತಿಯನ್ನು ಠಾಣೆಗೆ ಕರೆಯಿಸಿ ವಿಚಾರಿಸಿದ್ದಾರೆ.

‘ಯುವಕ–ಯುವತಿ ಇಬ್ಬರೂ ಪ್ರಾಪ್ತ ವಯಸ್ಕರು. ಅವರ ಮೇಲೆ ಯಾರೂ ಹಲ್ಲೆ ನಡೆಸಿಲ್ಲ‌. ಈ ಬಗ್ಗೆ ಅವರಿಂದಲೇ ಹೇಳಿಕೆ ಪಡೆದು ಖಾತರಿಪಡಿಸಿಕೊಂಡಿದ್ದೇವೆ. ಅವರಿಬ್ಬರನ್ನು ಊರಿಗೆ ಕಳುಹಿಸಿಕೊಡಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.