ಮಂಗಳೂರು: ‘ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ ಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅನುದಾನದ ಅಡಿಯಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ’ ಎಂದು ಸಂಸ್ಥೆಯ ಸಿಎಸ್ಆರ್ ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು.
ಸಂಸ್ಥೆ ವತಿಯಿಂದ ಎಂಡೊಸಲ್ಪಾನ್, ಎಚ್.ಐ.ವಿ, ರಕ್ತಬಲಹೀನತೆ, ಕ್ಷಯದಿಂದ ಬಳಲುವವರಿಗೆ, ವೃದ್ದಾಶ್ರಮ ಮತ್ತಿತರ ಕಡೆಗಳಿಗೆ ₹20 ಲಕ್ಷ ಮೌಲ್ಯದ ಸಿರಿಧಾನ್ಯಗಳನ್ನು ವಿತರಿಸಿ ಅವರು ಮಾತನಾಡಿದರು.
ಎಂಆರ್‌ಪಿಎಲ್ ಈ ಹಿಂದೆಯೂ ಎಂಡೊಸಲ್ಫಾನ್ ಪೀಡಿತರಿಗೆ ದಿನಬಳಕೆಯ ವಸ್ತುಗಳನ್ನು ನೀಡಿದೆ. ವೃದ್ಧಾಶ್ರಮ, ಆಸ್ಪತ್ರೆಗಳಿಗೆ ಆಂಬುಲೆನ್ಸ್ ನೀಡಿದೆ. ಪ್ರಸ್ತುತ 1,800 ಕೆ.ಜಿ. ಪೌಷ್ಟಿಕ ಆಹಾರ ವಸ್ತುಗಳನ್ನು ನೀಡಲಾಗಿದೆ. ಫಲಾನುಭವಿಗಳು ಇದರಿಂದ ಆರೋಗ್ಯ ಸುಧಾರಿಸಿಕೊಳ್ಳಬಹುದು. ಹೆಚ್ಚಿನ ಕಡೆ ಸ್ಥಳಕ್ಕೇ ತೆರಳಿ ನೇರವಾಗಿ ಫಲಾನುಭವಿಗಳಿಗೆ ನೀಡಲಾಗಿದೆ ಎಂದರು.
ಸ್ಟೀವನ್ ಪಿಂಟೊ ಮತ್ತಿತರ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.