ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯ ಕುಮಾರಧಾರ ಸೇತುವೆಯ ಮೇಲೆ ಕೆಸರು ನೀರು ನಿಂತಿದ್ದು ಮಳೆಗಾಲದಲ್ಲಿ ದ್ವಿಚಕ್ರ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುಪರ್ದಿಗೆ ಬರುವ ಈ ಸೇತುವೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗಲು ಮಾಡಿದ ರಂಧ್ರಗಳು ಮಣ್ಣು, ಕಸದಿಂದ ಮುಚ್ಚಿಕೊಂಡಿದ್ದು, ಧಾರಾಕಾರ ಮಳೆ ಬಂದಾಗ ರಸ್ತೆಯಲ್ಲಿ ನೀರು ನಿಲ್ಲುತ್ತಿದ್ದು, ವಾಹನಗಳು ಸೇತುವೆಯ ಮೇಲೆ ಸಂಚರಿಸುವಾಗ ಈ ಕೆಸರು ನೀರು ಪಾದಚಾರಿಗಳ ಮೇಲೆ, ದ್ವಿಚಕ್ರ ವಾಹನ ಸವಾರರ ಮೇಲೆ ಸಿಂಪಡಣೆಯಾಗುತ್ತಿದೆ.
‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಶೀಘ್ರವೇ ಸೇತುವೆ ಬದಿಯಲ್ಲಿ ಸಂಗ್ರಹಗೊಂಡ ಹೂಳು ತೆಗೆದು ಸ್ವಚ್ಛಗೊಳಿಸಬೇಕು’ ಎಂದು ಆಟೊ ರಿಕ್ಷಾ ಚಾಲಕರ ಸಂಘದ ಖಲಂದರ್ ಶಾಫಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.