ADVERTISEMENT

Muda Case | ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳಿತು: ನ್ಯಾ. ಸಂತೋಷ್ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 8:58 IST
Last Updated 25 ಸೆಪ್ಟೆಂಬರ್ 2024, 8:58 IST
ಎನ್. ಸಂತೋಷ್ ಹೆಗ್ಡೆ
ಎನ್. ಸಂತೋಷ್ ಹೆಗ್ಡೆ   

- ‍ಪ್ರಜಾವಾಣಿ ಕಡತ ಚಿತ್ರ

ಮಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉಚಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಯಲ್ಲಿ ಪಾಲ್ಗೊಂಡ ಅವರು ಪತ್ರಕರ್ತರ ಜೊತೆ ಮಾತನಾಡಿ ಕಾನೂನು ಹೋರಾಟ ಮಾಡಲು ಮುಖ್ಯಮಂತ್ರಿಗೆ ಅವಕಾಶ ಇದೆ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ರಾಜೀನಾಮೆ ನೀಡುವುದೇ ಸರಿ ಎಂದರು.

ADVERTISEMENT

ಸಿದ್ದ ರಾಮಯ್ಯ ಅವರು ಅವರು ತಾವೇನೂ ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ ಈಗ ಆರೋಪಗಳಿಗೆ ಸಂಬಂಧಿಸಿ ಪುರಾವೆಗಳು ಇವೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದ ತನಿಖೆ ಮಾಡುವ ಏಜೆನ್ಸಿ ಯಾವ ನಿರ್ಣಯಕ್ಕೆ ಬರುತ್ತವೆ ಎಂಬುದರ‌ ಮೇಲೆ ಪ್ರಕರಣ ಅಂತ್ಯ ಕಾಣುತ್ತದೆ. ಅದು ಆಮೇಲಿನ ವಿಷಯ. ಆದರೆ ಸದ್ಯ ಗಂಭೀರವಾದ ಆರೋಪ ಬಂದ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.