ADVERTISEMENT

ಬೆಂಗಳೂರಿನಿಂದ ಮುರುಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕ ಅನುಮಾನ್ಪದ ಸಾವು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 13:38 IST
Last Updated 27 ಅಕ್ಟೋಬರ್ 2024, 13:38 IST
ಮೌಜಾಮ್
ಮೌಜಾಮ್   

ಮೂಲ್ಕಿ: ಬೆಂಗಳೂರಿನಿಂದ ಮುರುಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು ಹಣ ಸುಲಿಗೆ ಮಾಡುವವರು ಕೊಲೆ ಮಾಡಿರುವ ಶಂಕೆ ಮೂಡಿದೆ.

ಚಿಕ್ಕಬಳ್ಳಾಪುರದ ಕುಮಾರಪೇಟೆ ನಿವಾಸಿ ಅಮೀರ್ ಖಾನ್ ಅವರ ಪುತ್ರ ಮೌಜಾಮ್ (35) ಮೃತಪಟ್ಟ ಯುವಕ. ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದ ಅವ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ರೈಲು ಉಡುಪಿ ತಲುಪಿದಾಗ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಮೌಜಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಸಂಬಂಧಿ ಆರಿಫ್ ಉಲ್ಲಾ ಖಾನ್ ಮೂಲ್ಕಿ ಠಾಣೆಗೆ ದೂರು ನೀಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.