ADVERTISEMENT

ಕೊಲೆ ಸಂತ್ರಸ್ತರಿಗೆ ₹ 30 ಲಕ್ಷ ಪರಿಹಾರ ಘೋಷಿಸಿದ ಮುಸ್ಲಿಂ ಸೆಂಟ್ರಲ್‌ ಕಮಿಟಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 22:55 IST
Last Updated 30 ಜುಲೈ 2022, 22:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಹತ್ಯೆಗೊಳಗಾದ ಕಳೆಂಜ ಗ್ರಾಮದ ಮಸೂದ್‌ ಹಾಗೂ ಸುರತ್ಕಲ್‌ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಫಾಝಿಲ್‌ ಕುಟುಂಬಗಳಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯು ತಲಾ 30 ಲಕ್ಷ ಪರಿಹಾರ ಘೋಷಣೆ ಮಾಡಿದೆ.

‘ಕಮಿಟಿಯ ಅಧ್ಯಕ್ಷರಾದ ಕೆ.ಎಸ್. ಮೊಹಮ್ಮದ್ ಮಸೂದ್ ನೇತೃತ್ವದಲ್ಲಿ ಕಮಿಟಿಯ ಮುಖಂಡರು ಶನಿವಾರ ಸಭೆ ನಡೆಸಿದ್ದೇವೆ. ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕುಟುಂಬದವರನ್ನು ಭೇಟಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ. ಪ್ರವೀಣ್‌ ಅವರ ಕುಟುಂಬಕ್ಕೆ ₹ 25 ಲಕ್ಷ ಪರಿಹಾರವನ್ನೂ ನೀಡಿದ್ದಾರೆ. ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಇಬ್ಬು ಯುವಕರ ಹತ್ಯೆ ನಡೆದಿದ್ದರೂ ಅವರ ಕುಟುಂಬಗಳನ್ನು ಮುಖ್ಯಮಂತ್ರಿಯವರು ಭೇಟಿಯೂ ಮಾಡಿಲ್ಲ, ಅವರಿಗೆ ಪರಿಹಾರವನ್ನೂ ನೀಡಿಲ್ಲ. ಸರ್ಕಾರ ಈ ತಾರತಮ್ಯ ನೀತಿಯನ್ನು ಖಂಡಿಸಿ, ನಾವೇ ದೇಣಿಗೆ ಸಂಗ್ರಹಿಸಿ ಸಂತ್ರಸ್ತ ಕುಟುಂಬಗಳಿಗೆ ನೀಡುವ ತೀರ್ಮಾನ ಕೈಗೊಂಡಿದ್ದೇವೆ’ ಎಂದು ಕಮಿಟಿಯ ಉಪಾಧ್ಯಕ್ಷ ಬಿ.ಎಂ. ಮುಮ್ತಾಜ್ ಅಲಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT