ಮಂಗಳೂರು: ನಗರದ ಕಂಕನಾಡಿಯಲ್ಲಿ ರಸ್ತೆಯ ಮೇಲೆ ನಮಾಜ್ ಮಾಡಿದ ಸಂಬಂಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆದಲ್ಲಿ ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.
‘ಮುಸ್ಲಿಂ ಸಂಘಟನೆಯ ಒತ್ತಡಕ್ಕೆ ಮಣಿದು, ನಗರ ಪೊಲೀಸ್ ಕಮಿಷನರ್ ಪ್ರಕರಣ ರದ್ದುಗೊಳಿಸಲು ನಿರ್ಧರಿಸಿರುವುದು ಸರಿಯಲ್ಲ. ಪೊಲೀಸ್ ಇಲಾಖೆಯ ಈ ಕ್ರಮ ಖಂಡನೀಯ’ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೇ 24ರಂದು ಮಧ್ಯಾಹ್ನ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ನಮಾಜ್ ನಡೆಸಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ನಂತರ ಕದ್ರಿಯ ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಇದಕ್ಕೆ ಮುಸ್ಲಿಂ ಸಂಘಟನೆಗಳು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.