ಮಂಗಳೂರು: ಇಲ್ಲಿಯ ಕಂಕನಾಡಿಯ ಮಸೀದಿ ಬಳಿ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸದೇ ನ್ಯಾಯಾಲಯಕ್ಕೆ'ಬಿ ರಿಪೋರ್ಟ್' ಸಲ್ಲಿಸಿದ್ದಾರೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದರು.
ಪೊಲೀಸರ ಈ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ವಿಧಾನ ಸಭೆ ಅಧಿವೇಶನದಲ್ಲಿಯೂ ವಿಷಯ ಪ್ರಸ್ತಾಪಿಸುವುದಾಗಿ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ ಇನ್ ಸ್ಪೆಕ್ಟರ್ ಗೆ ಕಡ್ಡಾಯ ರಜೆ ಶಿಕ್ಷೆ ನೀಡಿರುವುದು ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ರಾಜಕಾರಣದ ಭಾಗವೇ ಆಗಿದೆ ಎಂದು ದೂರಿದರು.
ಅನುಮತಿ ಪಡೆಯದೇ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣದ ಬಗ್ಗೆ ದನಿ ಎತ್ತಿದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಪ್ರಕರಣ ದಾಖಲಿಸಿದ್ದು ಖಂಡನೀಯ. ನಾವು ಶರಣ್ ಬೆಂಬಲಕ್ಕೆ ನಿಲ್ಲುತ್ತೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.