ಮಂಗಳೂರು: ನಗರದ ಕಂಕನಾಡಿ ಮಸೀದಿ ಮುಂದಿನ ರಸ್ತೆಯಲ್ಲಿ ನಮಾಜ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿಯ ಆಡಳಿತ ಮಂಡಳಿಯೇ ವಿಷಾದ ವ್ಯಕ್ತಪಡಿಸಿ ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸುತ್ತೇವೆಂದು ವಿವಾದಕ್ಕೆ ತೆರೆ ಎಳೆದರೂ, ಪೊಲೀಸರು ಮಾತ್ರ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಅಣತಿಯಂತೆ ಶರಣ್ ಪಂಪ್‌ವೆಲ್ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಿರುವುದು ಅಕ್ಷಮ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಪೋಲಿಸರ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ ಮಣಿದಿರುವ ಇಲಾಖೆ, ಏಕಪಕ್ಷೀಯವಾಗಿ ನಡೆದುಕೊಂಡಿದೆ. ಈ ಪ್ರಕರಣದ ಬೆಳವಣಿಗೆಯು ಜನಸಾಮಾನ್ಯರಿಗೆ ಯಾವ ಸಂದೇಶ ನೀಡುತ್ತಿದೆ ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ಹಾಗೂ ಪೊಲೀಸ್ ಇಲಾಖೆಯೇ ಉತ್ತರಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.