ಉಳ್ಳಾಲ: ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನಲ್ಲಿ ಸೆ.16 ಮತ್ತು 17ರಂದು ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘ಇಂಪೆಟಸ್–22’ ನಡೆಯಲಿದೆ ಎಂದು ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಹೇಳಿದರು.
ಬುಧವಾರ ಇಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಮಿಯೋಪಥಿ ಶಿಕ್ಷಣ ಮತ್ತು ಸಂಶೋಧನೆಯ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ. ಎರಡು ದಿನಗಳ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಮಟ್ಟದ ತಜ್ಞ ಹೋಮಿಯೋಪಥಿ ವೈದ್ಯರಾದ ಡಾ. ಶೇಖರ ಅಲಗುಂಡ್ಗಿ, ಡಾ. ಎನ್. ಮದನ್, ಹಾಗೂ ಡಾ. ಎಸ್ ಇಲಾಂಗೊ ಅವರು ಪ್ರಬಂಧ ಮಂಡಿಸಲಿದ್ದಾರೆ’ ಎಂದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ಸಮ್ಮೇಳನ ಉದ್ಘಾಟಿಸುವರು. ಕಂಕನಾಡಿಯ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಯ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲೊ ಅಧ್ಯಕ್ಷತೆ ವಹಿಸುವರು ಎಂದರು.
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ರೋಶನ್ ಕ್ರಾಸ್ತಾ ಮಾತನಾಡಿದರು. ಡಾ. ಇ.ಎಸ್.ಜೆ. ಪ್ರಭು ಕಿರಣ್, ಡಾ. ವಿಲ್ಮಾ ಮೀರಾ ಡಿಸೋಜ, ಡಾ. ಗಿರೀಶ್ ನಾವಡ, ಡಾ. ವಿವೇಕ್ ಶಕ್ತಿಧರನ್, ಡಾ. ಬ್ಲ್ಯಾನಿ ಲೊಬೊ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.