ಉಳ್ಳಾಲ: ಕೊಲ್ಯದ ಮೂಕಾಂಬಿಕೆಯ ಸಾನ್ನಿಧ್ಯದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಅ.3ರಿಂದ 13ರ ವರೆಗೆ ದೇವತಾ ವಿಧಿ ವಿಧಾನಗಳನ್ನು ಒಳಗೊಂಡು ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಮೂಕಾಂಬಿಕ ದೇವಸ್ಥಾನದ ಆಡಳಿತ ಸಮಿತಿ ಕೋಶಾಧಿಕಾರಿ ಕೃಷ್ಣಮೂರ್ತಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಧಾರ್ಮಿಕ, ಸಾಮಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಅ.12ರಂದು ಕ್ಷೇತ್ರದಲ್ಲಿ ಆಯುಧ ಪೂಜೆ, 13ರಂದು ಮಕ್ಕಳಿಗೆ ವಿದ್ಯಾರಂಭ, 13ರಂದು ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಚಂಡಿಕಾಹವನ ನಡೆಯಲಿದೆ. ಭರತನಾಟ್ಯ ಕ್ಷೇತ್ರದ ಸಾಧಕ ಉಳ್ಳಾಲ ಮೋಹನ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ದೇವಿ ಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ ನಾರಾಯಣ ಕುಂಪಲ, ಟ್ರಸ್ಟಿಗಳಾದ ಗೋಪಾಲ ಕುತ್ತಾರ್, ಶಿವಾನಂದ ಮೆಂಡನ್, ಮೋಹನ್ ಗೋರಿಗುಡ್ಡ, ಗುಣವತಿ ಆಚಾರ್, ಮಾತೃಮಂಡಳಿ ಅಧ್ಯಕ್ಷೆ ಸುಲೋಚಿನಿ ಟೀಚರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.