ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
2013ರ ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ಮುಲ್ಲೈ ಮುಗಿಲನ್ ಅವರು ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು. ಅದಕ್ಕೂ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.