ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2023, 19:30 IST
Last Updated 27 ಅಕ್ಟೋಬರ್ 2023, 19:30 IST
ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದರೆ ಬಹುಮಾನ ನೀಡುವುದಾಗಿ ಎನ್‌ಐಎ ಪ್ರಕಟಣೆ
ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದರೆ ಬಹುಮಾನ ನೀಡುವುದಾಗಿ ಎನ್‌ಐಎ ಪ್ರಕಟಣೆ   

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದೆ.

ನಿಷೇಧಿತ ಪಿಎಫ್‌ಐ ಸಂಘಟನೆ ಕಾರ್ಯಕರ್ತರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಡಂಗಡಿ ‌ಗ್ರಾಮದ ನೌಷದ್ (32 ವರ್ಷ– ಆರೋಪಿ ಸಂಖ್ಯೆ 23), ಕೊಡಗು ಜಿಲ್ಲೆ ಸೋಮವಾರಪೇಟೆಯ ಚೌಡ್ಲಿ ನಿವಾಸಿ ಅಬ್ದುಲ್‌ ನಾಸಿರ್‌ (41 ವರ್ಷ– ಆರೋಪಿ ಸಂಖ್ಯೆ 22), ಸೋಮವಾರಪೇಟೆಯ ಹನಗಲ್‌ ಕಲಂದಕೂರ್‌ ನಿವಾಸಿ, ಅಬ್ದುಲ್‌ ರಹಿಮಾನ್‌ (36 ವರ್ಷ– ಆರೋಪಿ  ಸಂಖ್ಯೆ 24) ಈ ಮೂವರ ಬಗ್ಗೆ ಸುಳಿವು ನೀಡಿದವರಿಗೆ ತಲಾ ₹2 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT