ADVERTISEMENT

ವಾಯುಭಾರ ಕುಸಿತ; ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 19 ಮೇ 2024, 5:57 IST
Last Updated 19 ಮೇ 2024, 5:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಂಭವವಿದ್ದು,  ಇದೇ 22ರವರೆಗೆ ಕರಾವಳಿಯುದ್ಧಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ.

ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ದೋಣಿಗಳು ತಕ್ಷಣ ದಡಕ್ಕೆ ಮರಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ. 

ADVERTISEMENT

ಇದೇ 20ರಂದು ಮತ್ತು ಇದೇ 22ರಂದು ಕರಾವಳಿಯಲ್ಲಿ ಪ್ರತಿಕೂಲ ಹವಾಮಾನ ಇರಲಿದ್ದು, ಗಂಟೆಗೆ 45 ಕಿ.ಮೀ ಯಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಗಾಳಿಯು ಗಂಟೆಗೆ 65 ಕಿ.ಮೀ. ವೇಗದಲ್ಲಿ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.