ADVERTISEMENT

18ನೇ ಬಾರಿ ಮೂಡುಬಿದಿರೆ ಸಮಗ್ರ ಚಾಂಪಿಯನ್

ಜಿಲ್ಲಾಮಟ್ಟದ ಪಿಯು ಕಾಲೇಜುಗಳ ಅಥ್ಲೆಟಿಕ್ಸ್ ಕೂಟ 2024

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 5:04 IST
Last Updated 23 ಅಕ್ಟೋಬರ್ 2024, 5:04 IST
ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಅಥ್ಲೆಟಿಕ್ಸ್ ಕೂಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲ್ಲೂಕು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು
ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಅಥ್ಲೆಟಿಕ್ಸ್ ಕೂಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲ್ಲೂಕು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು   

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಅಥ್ಲೆಟಿಕ್ಸ್ ಕೂಟದಲ್ಲಿ
ಬಾಲಕರ ಹಾಗೂ ಬಾಲಕಿಯರ ವಿಭಾಗಗಳಲ್ಲಿ ಮೂಡುಬಿದಿರೆ ತಾಲ್ಲೂಕು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

ಮೂಡುಬಿದಿರೆ ತಾಲ್ಲೂಕನ್ನು ಆಳ್ವಾಸ್ ಪಿಯು ಕಾಲೇಜಿನ 18 ಬಾಲಕಿಯರ ಮತ್ತು 23 ಬಾಲಕರ ತಂಡ ಪ್ರತಿನಿಧಿಸಿದ್ದು, ಬಾಲಕರ
ವಿಭಾಗದಲ್ಲಿ 12 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕ ಪದಕದೊಂದಿಗೆ 26 ಪದಕಗಳು ಲಭಿಸಿವೆ. ಬಾಲಕಿಯರ ವಿಭಾಗ 7 ಚಿನ್ನ,
11 ಬೆಳ್ಳಿ, 6 ಕಂಚಿನ ಪದಕಗಳೊಂದಿಗೆ 24 ಪದಕ ಗೆದ್ದುಕೊಂಡಿತು.

ಮೂಡುಬಿದಿರೆ ತಾಲ್ಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಪಿಯು ಕಾಲೇಜಿನ ದಯಾನಂದ್ ಮತ್ತು ಮೂಲ್ಕಿ ತಾಲ್ಲೂಕನ್ನು ಪ್ರತಿನಿಧಿಸಿದ ರಂಗಣ್ಣ
ಬಾಲಕರ ವಿಭಾಗದಲ್ಲಿ ‘ಬೆಸ್ಟ್ ಅಥ್ಲೀಟ್ ಪ್ರಶಸ್ತಿ’ ಗೆದ್ದುಕೊಂಡರು.

ADVERTISEMENT

ಮೂಡುಬಿದಿರೆ ತಾಲ್ಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಪಿಯು ಕಾಲೇಜಿನ ಚರಿಷ್ಮಾಗೆ ‘ಬೆಸ್ಟ್ ಅಥ್ಲೀಟ್ ಪ್ರಶಸ್ತಿ’ ಲಭಿಸಿತು.

ಸಂಜೆ ನಡೆದ ಸಮಾರೋಪದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ.ಮಹಮ್ಮದ್ ಸದಾಕತ್, ಜಿಲ್ಲಾ ಪಿಯು ಕಾಲೇಜಿನ ಕ್ರೀಡಾ ಸಂಯೋಜಕ ಶಶಿಧರ್ ಮಾಣಿ, ಪಿಯು ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರೇಮನಾಥ್ ಶೆಟ್ಟಿ, ಮೂಡುಬಿದಿರೆ ತಾಲ್ಲೂಕು ಕ್ರೀಡಾ ಸಂಯೋಜಕ ನವೀನ್ ಹೆಗ್ಡೆ, ಆಳ್ವಾಸ್ ಪಿಯು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನವೀನ್ ರೈ, ದಕ್ಷಿಣ ಕನ್ನಡ ವೇಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.