ವಿಟ್ಲ: ಧರ್ಮ ಸಂರಕ್ಷಣೆಯ ವಿಚಾರದಲ್ಲಿ ಪ್ರತಿಯೊಬ್ಬರ ಪಾತ್ರ ಮುಖ್ಯ. ಮಣ್ಣು ಸಂಸ್ಕೃತಿಯ ಮೊದಲ ಭಾಗವಾಗಿದ್ದು, ಪ್ರಕೃತಿ ಸಂರಕ್ಷಣೆಯ ಕಾರ್ಯವಾಗಬೇಕು ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ವತಿಯಿಂದ ಆ.8ರಂದು ನಡೆಯಲಿರುವ ಜನ್ಮದಿನೋತ್ಸವ - ಗ್ರಾಮೋತ್ಸವ- ಗುರುವಂದನೆ ಅಂಗವಾಗಿ ನಡೆದ ಕೆಸರ್ ಕಂಡೊಂಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಾಧ್ವಿ ಮಾತಾನಂದಮಯೀ ಸಾನ್ನಿಧ್ಯ ವಹಿಸಿದ್ದರು. ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ, ಕಾರ್ಯಾಧ್ಯಕ್ಷ ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು, ಕೋಶಾಧಿಕಾರಿಗಳಾದ ಎ. ಸುರೇಶ್ ರೈ, ಎ. ಅಶೋಕ್ ಕುಮಾರ್, ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಕನ್ಯಾನ ಹಾಗೂ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಕೆ. ಪಿ. ರಘುರಾಮ ಶೆಟ್ಟಿ, ರಘುನಾಥ ಶೆಟ್ಟಿ ಪಟ್ಲಗುತ್ತು, ಕ್ರೀಡೋತ್ಸವ ಸಮಿತಿ ಸಂಚಾಲಕ ಕಿರಣ್ ಕುಮಾರ್, ಧರ್ಮ ಪ್ರಸಾದ್ ರೈ ಇದ್ದರು.
ರಿಷಿಕಾ, ಸೌಜನ್ಯ, ವಿಶುದ್ಥಿ, ಶಮಾ ಪ್ರಾರ್ಥನೆ ಹಾಡಿದರು. ಯಶವಂತ ವಿಟ್ಲ ಸ್ವಾಗತಿಸಿದರು. ಮಾತೇಶ್ ಭಂಡಾರಿ ವಂದಿಸಿದರು. ವಿಜೇತ್ ರೈ ಅಂಕತಡ್ಕ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.