ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅರಬ್ಬೀ ಸಮುದ್ರದ ಕಿನಾರೆಯನ್ನು ಸ್ವಚ್ಛಗೊಳಿಸುವ ಅಭಿಯಾನ ಆರಂಭಿಸಲಾಗಿದೆ. ಈ ಅಭಿಯಾನದ ಅಂಗವಾಗಿ ಪಣಂಬೂರಿನಲ್ಲಿ ಕಿನಾರೆಯಲ್ಲಿದ್ದ ಕಸವನ್ನು ಶುಕ್ರವಾರ ಸ್ವಚ್ಛಗೊಳಿಸಲಾಯಿತು.
ಮಂಗಳೂರು ಪೊಲೀಸ್ ಕಮಿಷನರೇಟ್‌ನ ಡಿಸಿಪಿ (ಕಾನೂನು ಸುವ್ಯವಸ್ಥೆ) ಅಂಶು ಕುಮಾರ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಎನ್‌ಎಂಪಿಎ, ವಿವಿಧ ಕಾಲೇಜುಗಳ ಎನ್‌ಸಿವಿ ವಿದ್ಯಾರ್ಥಿಗಳು, ಕರಾವಳಿ ಭದ್ರತಾ ಪೊಲೀಸ್ ಸಿಬ್ಬಂದಿ, ಎಂಆರ್‌ಪಿಎಲ್, ಕಸ್ಟಮ್ಸ್ ಇಲಾಖೆಗಳ ಸಿಬ್ಬಂದಿ, ಕೆನರಾ ವಾಣಿಜ್ಯೋದ್ಯಮ ಸಂಸ್ಥೆ, ಯಂಗ್ ಇಂಡಿಯಾ ಬಳಗ, ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸೇರಿ 200ಕ್ಕೂ ಅಧೀಕ ಮಂದಿ ಅಭಿಯಾನದಲ್ಲಿ ಪಾಲ್ಗೊಂಡರು.
'ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ‘ಸ್ವಚ್ಛತೆಯೇ ಸೇವೆ’ ಧ್ಯೇಯವಾಕ್ಯದಡಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವು ಸೆ.17ರಂದು ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದಂದು ಕೊನೆಗೊಳ್ಳಲಿದೆ' ಎಂದು ಕರಾವಳಿ ರಕ್ಷಣಾ ಪಡೆಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.