ಉಪ್ಪಿನಂಗಡಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪೈಕಿ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿಯ ಅಗ್ನಾಡಿ ನಿವಾಸಿ ಮಸೂದ್ ಮನೆಗೆ ಎನ್ಐಎ ಅಧಿಕಾರಿಗಳು ಭಾನುವಾರ ಭೇಟಿ ನೀಡಿ, ಆ.18ರ ಒಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ಆದೇಶ ಪ್ರತಿಯನ್ನು ಮನೆಯ ಮುಂಬಾಗಿಲಿಗೆ ಎರಡನೇ ಬಾರಿ ಅಂಟಿಸಿದ್ದಾರೆ.
ಈ ಸಂಬಂಧ ಧ್ವನಿ ವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು ಆ.18ರ ಒಳಗೆ ನ್ಯಾಯಾಲಯಕ್ಕೆ ಶರಣಾಗದಿದ್ದರೆ ಮನೆಯನ್ನು ಜಪ್ತಿ ಮಾಡುವ ಬಗ್ಗೆ ಹಾಗೂ ತಲೆ ಮರೆಸಿಕೊಂಡಿರುವ ಆರೋಪಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಪ್ರಕಟಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಸಂಘಟನೆಯ ರಾಜ್ಯ ಮಟ್ಟದ ನಾಯಕ ಮಸೂದ್ ಶಾಮೀಲಾಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಸುಳಿವು ಲಭಿಸಿದ ದಿನದಿಂದ ತಲೆ ಮರೆಸಿಕೊಂಡಿದ್ದ. ಪ್ರಕರಣದಲ್ಲಿ 5ನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು. ನೋಟಿಸ್ ಅಂಟಿಸುವ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಪೊಲೀಸರು ಎನ್ಐಎ ಅಧಿಕಾರಿಗಳೊಂದಿಗೆ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.