ಸುಳ್ಯ: ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡಜಿಲ್ಲಾ ಘಟಕದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಶೋಧ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.
ಹತ್ಯೆಯಲ್ಲಿ ಭಾಗಿಯಾಗಿದ್ದ ಒಬ್ಬಾತ ಬೆಂಗಳೂರಿಗೆ ತೆರಳಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಇತ್ತು. ಈ ಸುಳಿವಿನ ಆಧಾರದಲ್ಲಿ ಬೆಂಗಳೂರಿನ ಕೆ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಇಬ್ಬರನ್ನು ಭಾನುವಾರ ರಾತ್ರಿ ವಶಕ್ಕೆ ಪಡೆದು ಜಿಲ್ಲೆಗೆ ಕರೆ ತಂದಿದ್ದಾರೆ. ಪೊಲೀಸ್ ವಶದಲ್ಲಿರುವ ಈ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದವರೊ ಅಥವಾ ಆರೋಪಿಗೆ ಆಶ್ರಯ ನೀಡಿದವರೋ ಎಂಬುದನ್ನು ಪೊಲೀಸರು ಖಚಿತಪಡಿಸಿಲ್ಲ.
ಕೃತ್ಯದಲ್ಲಿ ಭಾಗಿಯಾದ ಇನ್ನೂ ಮೂವರು ಆರೋಪಿಗಳ ಬೆನ್ನು ಹತ್ತಿದ್ದಾರೆ.'ಕೃತ್ಯದಲ್ಲಿ ಯಾರು ಭಾಗಿದ್ದಾರೆ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಪೊಲೀಸರ ತಂದ ಬೇರೆ ಬೇರೆ ಕಡೆ ಶೋಧ ಕಾರ್ಯದಲ್ಲಿ ತೊಡಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ' ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ 'ಪ್ರಜಾವಾಣಿ'ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.