ADVERTISEMENT

ಪ್ರೊ.ನಳಿಲು ಸುಚೇತಾ ಕುಮಾರಿಗೆ ಜಾಗತಿಕ ವಿಜ್ಞಾನಿ ಪಟ್ಟಿಯಲ್ಲಿ ಸ್ಥಾನ 

​ಪ್ರಜಾವಾಣಿ ವಾರ್ತೆ
Published 11 ಮೇ 2024, 13:30 IST
Last Updated 11 ಮೇ 2024, 13:30 IST
ಡಾ| ಸುಚೇತ ಕುಮಾರಿ
ಡಾ| ಸುಚೇತ ಕುಮಾರಿ   

ಉಳ್ಳಾಲ: ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಬಯೋಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕಿ, ಸೆಂಟ್ರಲ್ ರಿಸರ್ಚ್ ಲ್ಯಾಬೊರೇಟರಿಯ ಪ್ರಧಾನ ವೈಜ್ಞಾನಿಕ ಅಧಿಕಾರಿಯಾಗಿರುವ ಡಾ.ಸುಚೇತಾ ಕುಮಾರಿ ಅವರು ಜಾಗತಿಕ ಮಟ್ಟದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಅಮೇರಿಕಾದ ಸ್ಟ್ಯಾನ್‌ಫೋರ್ಡ್‌ ವಿವಿಯ ಎಲ್ಸೇವಿಯರ್ ಮುದ್ರಣ ಸಂಸ್ಥೆಯ ಸಹಭಾಗಿತ್ವದಲ್ಲಿ ಹೊರತಂದಿರುವ ವಿಶ್ವದ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಅವರು ಸ್ಥಾನ ಪಡೆದಿದ್ದಾರೆ. ಸಂಶೋಧನಾ ಲೇಖನಗಳು, ಉಲ್ಲೇಖಗಳು, ಎಚ್-ಇಂಡೆಕ್ಸ್ ಮೊದಲಾದ ಸಂಯೋಜಿತ ಮಾನದಂಡಗಳನ್ನು ಆಧರಿಸಿ ಒಂದು ಲಕ್ಷ ವಿಜ್ಞಾನಿಗಳ ಪಟ್ಟಿಯಲ್ಲಿ ಸುಚೇತಾ ಅವರ ಹೆಸರಿದೆ. 2024ರ ಸಾಲಿನ ಸಂಶೋಧಕರು ನಡೆಸಿದ ಸಮೀಕ್ಷೆಯಲ್ಲಿ ಜೀವರಸಾಯನಶಾಸ್ತ್ರದ ಕ್ಷೇತ್ರದಲ್ಲಿ ಅವರು ಸ್ಥಾನ ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT