ADVERTISEMENT

ಕನ್ನಡ ನಾಮಫಲಕ: ಪ್ರತಿ ಜಿಲ್ಲೆಯಲ್ಲಿ ಹೋರಾಟ: ನಾರಾಯಣ ಗೌಡ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2024, 2:43 IST
Last Updated 16 ಮಾರ್ಚ್ 2024, 2:43 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಗಳೂರು: ಕನ್ನಡ ನಾಮಫಲಕ ಅಳವಡಿಕೆ ಹೋರಾಟವನ್ನು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಿಲ್ಲೆಗಳಲ್ಲೂ ನಾಮಫಲಕ ಕಡ್ಡಾಯ ಮಾಡಬೇಕು. ನಾಡು–ನುಡಿಯ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಕನ್ನಡ ಪರ ಕೆಲಸ ಮಾಡುವ ಅಭ್ಯರ್ಥಿಗಳನ್ನು ವೇದಿಕೆ ಬೆಂಬಲಿಸಲಿದೆ. ಹಿಂದಿ ಮಾತನಾಡುವ ಉತ್ತರ ಭಾರತದವರ ಪ್ರಮಾಣ ಹೆಚ್ಚಾಗಿದೆ. ವಲಸೆಗೆ ಕಡಿವಾಣ ಹಾಕದಿದ್ದರೆ, ಭವಿಷ್ಯದಲ್ಲಿ ಭಾಷೆ, ಸಂಸ್ಕೃತಿಗೆ ಧಕ್ಕೆಯಾಗಲಿದೆ’ ಎಂದರು.

ADVERTISEMENT

‘ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ವಿಚಾರವನ್ನು ಬೆಂಬಲಿಸುತ್ತೇವೆ. ತುಳು, ಬ್ಯಾರಿ, ಕೊಂಕಣಿ, ಕೊಡವ ಇವೆಲ್ಲ ನಮ್ಮ ಸಹೋದರ ಭಾಷೆಗಳು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.