ADVERTISEMENT

ಪುತ್ತೂರು | 'ಶಿಕ್ಷಣ ಇಲಾಖೆ ಆದೇಶ ರದ್ದುಗೊಳಿಸಲು ಆಗ್ರಹ'

ಅತಿಥಿ ಉಪನ್ಯಾಸಕರಿಂದ ಶಾಸಕ ಅಶೋಕ್‌ ಕುಮಾರ್ ರೈಗೆ ಮನವಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 5:44 IST
Last Updated 17 ಜೂನ್ 2024, 5:44 IST
ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಗೊಳಿಸುವಂತೆ ಅತಿಥಿ ಉಪನ್ಯಾಸಕರು ಶಾಸಕ ಅಶೋಕ್‌ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು
ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಗೊಳಿಸುವಂತೆ ಅತಿಥಿ ಉಪನ್ಯಾಸಕರು ಶಾಸಕ ಅಶೋಕ್‌ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು   

ಪುತ್ತೂರು: ಪಿಯುಸಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಬಿಇಡಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು ಇದನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಅತಿಥಿ ಉಪನ್ಯಾಸಕರು ಶಾಸಕ ಅಶೋಕ್‌ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು.

ಉಪನ್ಯಾಕರಾದ ತನುಜಾಕ್ಷಿ ಶೆಟ್ಟಿ, ಪ್ರಜ್ಞಾ, ಸಾಧನಾ, ಶೋಭಿತಾ, ಅಕ್ಷತಾ, ನವ್ಯಶ್ರೀ, ಜ್ಯೋತಿ, ಮಮತಾ, ಸಹನಾ, ಆಯಿಷತ್ ಮರ್ವ, ಮಹಮ್ಮದ್ ಜುಬೈರ್, ಪ್ರಸಾದ್, ತುಷಾರ, ಶ್ರುತಿ,ಅಶ್ವಿತಾ, ಉಷಾ, ಚಂಧ್ರಿಕಾ, ಯೋಗೀಶ್ವರಿ, ದಿವ್ಯ ಬೇಬಿ, ಮತ್ತು ದೀಕ್ಷಿತಾ ಅವರು ಶಾಸಕರನ್ನು ಭೇಟಿಯಾದರು.

‘ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿದ್ದಾರೆ. ನಾವು ಹಲವು ವರ್ಷಗಳಿಂದ ಉಪನ್ಯಾಸ ಮಾಡುತ್ತಿದ್ದು, ಅದನ್ನು ಮುಂದುವರಿಸಬೇಕಾದರೆ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಕಡ್ಡಾಯವಾಗಿ ಬಿಇಡಿ ಮಾಡಬೇಕಿದೆ. ಈ ಆದೇಶ ಜಾರಿಯಾದರೆ ಹಲವರು ಕೆಲಸ ಕಳೆದುಕೊಳ್ಳಲಿದ್ದೇವೆ. ಹೊಸ ಆದೇಶ ಸಂಕಷ್ಟ ತಂದೊಡ್ಡಿದೆ’ ಎಂದು ಹೇಳಿದರು.

ADVERTISEMENT

ಪಿಯು ಅತಿಥಿ ಶಿಕ್ಷಕರಿರುವಲ್ಲಿ ಖಾಯಂ ಶಿಕ್ಷಕರನ್ನು ನಿಯೋಜನೆ ಮಾಡುತ್ತಿದ್ದು, ಇದರಿಂದ ಅತಿಥಿ ಉಪನ್ಯಾಸಕರಿಗೆ ತೊಂದರೆಯಾಗುತ್ತಿದೆ. ಅತಿಥಿ ಉಪನ್ಯಾಕರು ಇರುವಲ್ಲಿ ಖಾಯಂ ಶಿಕ್ಷಕರನ್ನು ನಿಯೋಜನೆ ಮಾಡಬಾರದು ಎಂದು ಮನವಿ ಮಾಡಿದರು. ಅಧಿಕಾರಿಗಳ ಜೊತೆ ಮಾತನಾಡಿದ ಶಾಸಕರು ಅತಿಥಿ ಉಪನ್ಯಾಸಕರಿರುವ ಕಾಲೇಜುಗಳಲ್ಲಿ ಖಾಯಂ ಶಿಕ್ಷಕರನ್ನು ನಿಯೋಜನೆ ಮಾಡದಂತೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.