ADVERTISEMENT

ಶಿಕ್ಷಣದಿಂದ ಸುಶಿಕ್ಷತ ಸಮಾಜ ನಿರ್ಮಾಣ: ಮಾಜಿ ಸಚಿವ ರಮಾನಾಥ ರೈ

ಬಿ.ಸಿ.ರೋಡು: ಎನ್‌ಎಸ್‌ಯುಐನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 2:57 IST
Last Updated 22 ಆಗಸ್ಟ್ 2022, 2:57 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುೈ) ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶನಿವಾರ ಸನ್ಮಾನಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನವಾಝ್ ಸುಳ್ಯ ಇದ್ದಾರೆ
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುೈ) ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶನಿವಾರ ಸನ್ಮಾನಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನವಾಝ್ ಸುಳ್ಯ ಇದ್ದಾರೆ   

ಬಂಟ್ವಾಳ: ಶಿಕ್ಷಣದಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.

ಇಲ್ಲಿನ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ವತಿಯಿಂದ ಶನಿವಾರ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿಮತ್ತು ಪಿಯುಸಿಯಲ್ಲಿ ಗರಿಷ್ಟ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ಶಿಕ್ಷಕ ಕೆ.ರಮೇಶ್ ನಾಯ್ಕ್ ರಾಯಿ ಮಾತನಾಡಿದರು. ಪಕ್ಷದ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಬಿ.ಪದ್ಮಶೇಖರ್ ಜೈನ್, ಎನ್ಎಸ್‌ಯುಐ ಜಿಲ್ಲಾ ಘಟಕದ ಉಪಾಧ್ಯಕ್ಷ ಪವನ್ ಸಾಲಿಯಾನ್, ಅಂಕುಶ್, ಅನ್ವಿತ್ ಕಟೀಲು, ನಜೀಬ್, ಮಲ್ಲಿಕಾ ವಿ. ಶೆಟ್ಟಿ, ಜಯಂತಿ ಪೂಜಾರಿ, ನವಾಝ್ ಬಡಕಬೈಲು ಇದ್ದರು.

ADVERTISEMENT

ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ನವಾಝ್ ಸುಳ್ಯ ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಅಂಕುಶ್ ವಂದಿಸಿದರು. ಬಾತಿಶ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.