ADVERTISEMENT

ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿ ಅಗತ್ಯ: ವೈ. ರವೀಂದ್ರನಾಥ ರಾವ್

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2023, 5:28 IST
Last Updated 5 ನವೆಂಬರ್ 2023, 5:28 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಗಳೂರು: ಭಾರತದಲ್ಲಿರುವ ಬಹುತೇಕ ಹಿಂದುಳಿದ ವರ್ಗಗಳಲ್ಲಿ ಬಡತನ, ಶಿಕ್ಷಣದ ಕೊರತೆ, ಸಾಮಾಜಿಕ ಬಹಿಷ್ಕಾರ ಮೊದಲಾದ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮೀಸಲಾತಿ, ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ನ್ಯಾಯ ತರಲು ಇರುವ ಪ್ರಮುಖ ಉಪಕ್ರಮವಾಗಿದೆ ಎಂದು ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ವೈ. ರವೀಂದ್ರನಾಥ ರಾವ್ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯ, ಸಮಾಜಶಾಸ್ತ್ರ ಸ್ನಾತಕೋತ್ತರ ಮತ್ತು ಸಂಶೋಧನಾ ಅಧ್ಯಯನ ಕೇಂದ್ರ, ಸಮಾಜಶಾಸ್ತ್ರ ವಿಭಾಗ ವಿಶ್ವವಿದ್ಯಾಲಯ ಕಾಲೇಜು, ಸುಲಬ್ ಅಂತಾರಾಷ್ಟ್ರೀಯ ಸಾಮಾಜಿಕ ಸೇವಾ ಸಂಸ್ಥೆ ಹಾಗೂ ಮಂಗಳೂರು ಸಮಾಜಶಾಸ್ತ್ರ ಸಂಘದ ಆಶ್ರಯದಲ್ಲಿ ‘ಹಿಂದುಳಿದ ವರ್ಗ, ನೈರ್ಮಲ್ಯೀಕರಣ ಮತ್ತು ಸಾಮಾಜಿಕ ಅಭಿವೃದ್ಧಿ’ ಕುರಿತು ಆಯೋಜಿಸಿದ್ದ ಎರಡು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ADVERTISEMENT

‘ಆಧುನಿಕ ಕಾಲಘಟ್ಟದಲ್ಲಿ ಜನರನ್ನು ರಾಷ್ಟ್ರಗಳ ನಿಜವಾದ ಸಂಪತ್ತು ಎಂದು ಪರಿಗಣಿಸಿರುವುರಿಂದ, ಸಾಮಾಜಿಕ ಅಭಿವೃದ್ಧಿ ಆ ದಿಕ್ಕಿನಲ್ಲಿ ಸಾಗಬೇಕು. ಜನರು ಸಂಪೂರ್ಣ ಸಾಮರ್ಥ್ಯ, ಕೌಶಲ ಅರಿತು ದುಡಿಯುವ ಚೈತನ್ಯ ಪಡೆಯುವ ಮೂಲಕ ಸಮಸ್ಯೆಗಳನ್ನು ನಿವಾರಿಕೊಳ್ಳಲು ಸಾಧ್ಯವಾಗುವಂತಹ ಸಾಮಾಜಿಕ ವಾತಾವರಣ ಸೃಷ್ಟಿಸಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲೆ ಅನಸೂಯಾ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಿನಯ್ ರಜತ್, ಮಂಗಳೂರು ಸಮಾಜಶಾಸ್ತ್ರ ಸಂಘದ ಅಧ್ಯಕ್ಷ ಪ್ರೊ. ಯೋಗೀಂದ್ರ ಬಿ., ರಾಷ್ಟ್ರೀಯ ವಿಚಾರ ಸಂಕಿರಣದ ಸಂಚಾಲಕ ರಿಚರ್ಡ್ ಪಾಯಿಸ್, ಸಂಘಟನಾ ಕಾರ್ಯದರ್ಶಿ  ಗಾಯತ್ರಿ ಎನ್. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.