ಪುತ್ತೂರು: ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಡ್ನೂರು ಗ್ರಾಮದಲ್ಲಿ ಹಾದು ಹೋಗುವ ಸಸ್ಪೇಟಿ-ಪಳನೀರು ರಸ್ತೆ ದುರಸ್ತಿಗೊಳಿಸದೆ ಇರುವುದನ್ನು ಖಂಡಿಸಿ ಆ ಭಾಗದ ಮತದಾರರು ಮಾಡ್ನೂರು 2ನೇ ವಾರ್ಡ್‌ನ ತೆರವಾದ ಸ್ಥಾನಕ್ಕೆ ನ.23ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದಾರೆ.
ಈ ಬಗ್ಗೆ ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಿರುವ ಗ್ರಾಮಸ್ಥರು, ‘ಸಸ್ಪೇಟಿ– ಪಳನೀರು ಸಂಪರ್ಕ ರಸ್ತೆಯನ್ನು ದುರಸ್ತಿ ಮಾಡದೆ ಇರುವುದರಿಂದ ಮತದಾನ ಊರಿನ ಮತದಾರರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದೇವೆ’ ಎಂದು ಸೆಸ್ಪೇಟಿ-ಪಳನೀರು ಭಾಗದ ಮತದಾರರು ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಕಾವು ಅಶ್ವತ್ಥಡಿಯಿಂದ ಸಸ್ಪೇಟಿ-ಪಳನೀರು ಮೂಲಕ ಈಶ್ವರಮಂಗಲ-ಪಳ್ಳತ್ತೂರು ಸಂಪರ್ಕಿಸುವ ಅಂತರರಾಜ್ಯ ರಸ್ತೆಯು ಸಾಂತ್ಯದಲ್ಲಿ ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಹಲವಾರು ದ್ವಿಚಕ್ರ ವಾಹನ ಸವಾರರು ರಸ್ತೆ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ. ರಸ್ತೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಈ ಕಾರಣದಿಂದ ಮತದಾನ ಬಹಿಷ್ಕರಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಮುಂದಿನ ದಿನಗಳಲ್ಲಿ ಈ ರಸ್ತೆಗೆ ಕಾಯಕಲ್ಪ ನೀಡುವ ವ್ಯಕ್ತಿ ಅಥವಾ ಪಕ್ಷವನ್ನು ಬೆಂಬಲಿಸುತ್ತೇವೆ. ರಸ್ತೆ ಅಭಿವೃದ್ಧಿ ಪಡಿಸಬೇಕೆಂಬ ನಮ್ಮ ಬೇಡಿಕೆಗೆ ಮನ್ನಣೆ ಸಿಗದಿದ್ದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಮತದಾನ ಮಾಡುವುದಿಲ್ಲ ಎಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.