ADVERTISEMENT

ಚಂದ್ರಶೇಖರ್‌ಗೆ ಸಮಾಜ ಮಂದಿರ ಪುರಸ್ಕಾರ ಪ್ರದಾನ 

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 16:55 IST
Last Updated 3 ಅಕ್ಟೋಬರ್ 2024, 16:55 IST
ಮೂಡುಬಿದಿರೆ ಸಮಾಜ ಮಂದಿರದಲ್ಲಿ ಗುರುವಾರ ಆರಂಭಗೊಂಡ 77ನೇ ದಸರಾ ಉತ್ಸವದಲ್ಲಿ ಎಂಸಿಎಸ್ ಸೊಸೈಟಿಯ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಎಂ.ಅವರಿಗೆ ಮಂಗಳೂರು ವಿವಿ ಕುಲಪತಿ ಪಿ.ಎಲ್.ಧರ್ಮ ಸಮಾಜ ಮಂದಿರ ಪುರಸ್ಕಾರ ನೀಡಿ ಗೌರವಿಸಿದರು
ಮೂಡುಬಿದಿರೆ ಸಮಾಜ ಮಂದಿರದಲ್ಲಿ ಗುರುವಾರ ಆರಂಭಗೊಂಡ 77ನೇ ದಸರಾ ಉತ್ಸವದಲ್ಲಿ ಎಂಸಿಎಸ್ ಸೊಸೈಟಿಯ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಎಂ.ಅವರಿಗೆ ಮಂಗಳೂರು ವಿವಿ ಕುಲಪತಿ ಪಿ.ಎಲ್.ಧರ್ಮ ಸಮಾಜ ಮಂದಿರ ಪುರಸ್ಕಾರ ನೀಡಿ ಗೌರವಿಸಿದರು   

ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರದಲ್ಲಿ ಗುರುವಾರ ಪ್ರಾರಂಭಗೊಂಡ 77ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಇಲ್ಲಿನ ಎಂಸಿಎಸ್ ಸೊಸೈಟಿಯ ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ.ಅವರಿಗೆ ‘ಸಮಾಜ ಮಂದಿರ ಪುರಸ್ಕಾರ’ ಪ್ರದಾನ ಮಾಡಲಾಯಿತು.

ದಸರಾ ಉತ್ಸವವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ, ನವರಾತ್ರಿ ಹಬ್ಬ ಆಚರಣೆಗೆ ಸೀಮಿತವಾಗದಿರಲಿ. ಹೆಣ್ಣುಮಕ್ಕಳಿಗೆ ರಕ್ಷಣೆ ಜತೆಗೆ ಅವರ ಹಕ್ಕುಳ ರಕ್ಷಣೆಯೂ ಆಗಬೇಕು. ಸಾಂಸ್ಕೃತಿಕ ಬದುಕನ್ನು ಕಟ್ಟಿಕೊಂಡು ಸಂಭ್ರಮಿಸಿದಾಗ ದಸರಾ ಉತ್ಸವಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದರು.

ಸಮಾಜ ಮಂದಿರ ಪುರಸ್ಕಾರ ಸ್ವೀಕರಿಸಿದ ಚಂದ್ರಶೇಖರ್ ಎಂ., ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಗುಣ ನಮ್ಮಲ್ಲಿರಬೇಕು. ಫಲಾಪೇಕ್ಷೆ ಇಲ್ಲದೆ ಮಾಡಿದ ಕೆಲಸದಿಂದ ನಿಜವಾದ ಸಂತೃಪ್ತಿ ಇದೆ ಎಂದು ನಂಬಿಕೊಂಡು ಬಂದಿದ್ದೇನೆ. ಸಹಕಾರ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಸಮಾಜ ಮಂದಿರ ಗುರುತಿಸಿದೆ ಎಂದರು.

ADVERTISEMENT

ಸಮಾಜ ಮಂದಿರ ಸಭಾದ ಉಪಾಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದ್ದರು. ದಸರಾ ಉತ್ಸವದ ಸಂಚಾಲಕರಾದ ಪುಂಡಿಕಾಯ್ ಗಣಪಯ್ಯ ಭಟ್ ಸ್ವಾಗತಿಸಿದರು. ಗಣೇಶ್ ಕಾಮತ್ ನಿರೂಪಿಸಿದರು. ಜಯರಾಜ್ ಕಂಬಳಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.