ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ. ಸಚಿವ ಈಶ್ವರಪ್ಪ ಕೂಡ ತನಿಖೆಗೆ ಒತ್ತಾಯಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಪಕ್ಷ ಮತ್ತು ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದರು.
ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲರದು ವಾಟ್ಸ್ಆ್ಯಪ್ ಸಂದೇಶ ಇದೆಯೇ ಹೊರತು, ಡೆತ್ ನೋಟ್ ಅಲ್ಲ. ಈ ಎಲ್ಲ ಸಂಗತಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಹಿಂದಿನ ಎಲ್ಲ ವಿಚಾರಗಳ ತನಿಖೆ ಮಾಡಬೇಕಾಗುತ್ತದೆ. ಈ ಪ್ರಕ್ರಿಯೆಗೆ 2-3 ದಿನಗಳು ಬೇಕಾಗಬಹುದು. ನಂತರ ಸತ್ಯಾಸತ್ಯತೆ ತಿಳಿದು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.