ADVERTISEMENT

ಬಂಟ್ವಾಳ | ಸತೀಶ್ ಪೂಜಾರಿ ಬಂಧನ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2023, 12:49 IST
Last Updated 22 ಆಗಸ್ಟ್ 2023, 12:49 IST
ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಯಿತು
ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಯಿತು   

ಬಂಟ್ವಾಳ: ಗೌರಿಬಿದನೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ರಾಷ್ಟ್ರೀಯತೆ ಬಗ್ಗೆ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೊಜಕ್ ಸತೀಶ್ ದಾವಣಗೆರೆ ಅವರನ್ನು ಕಾಂಗ್ರೆಸ್ ಪ್ರೇರಿತ ಪೊಲೀಸ್ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಬಂಧಿಸಿದ ಘಟನೆ ಖಂಡನೀಯ ಎಂದು ಸಂಘಟನೆಯ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ತುಷ್ಟೀಕರಣ ನೀತಿಯಿಂದ ಹಿಂದೂ ಕಾರ್ಯಕರ್ತರ ಧ್ವನಿ ಅಡಗಿಸಲು ಕಾಂಗ್ರೆಸ್ ಹುನ್ನಾರ ನಡೆಸಿದ್ದು, ಇಂಥ ಬೆದರಿಕೆಗಳಿಗೆ ಹಿಂದೂ ಸಂಘಟನೆ ಜಗ್ಗುವುದಿಲ್ಲ ಎಂದು ಅವರು ಹೇಳಿದರು.

ADVERTISEMENT

ಪ್ರಮುಖರಾದ ರವಿರಾಜ್ ಬಿಸಿರೋಡ್, ರತ್ನಾಕರ ಶೆಟ್ಟಿ ಕಲ್ಲಡ್ಕ, ರಾಮದಾಸ್ ಬಂಟ್ವಾಳ ಮಾತನಾಡಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಸಮಿತ್ ರಾಜ್ ಧರೆಗುದ್ದೆ, ಪ್ರಕಾಶ್ ಕುಂಪಲ, ಅರುಣ್ ಸಜಿಪ, ಗಣೇಶ್ ಕೆದಿಲ, ಬಾಲಕೃಷ್ಣ ಕಲಾಯಿ, ರವಿ ಕೆಂಪುಗುಡ್ಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.