ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಇದೇ 18ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ಪುತ್ತೂರು ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶ ಮಾಡಿದ್ದಾರೆ.
ಮಂಗಳೂರು, ಉಳ್ಳಾಲ ಹಾಗೂ ಮೂಡುಬಿದಿರೆ ಹಾಗೂ ಮೂಲ್ಕಿ ತಾಲ್ಲೂಕುಗಳಿಗೆ ಈ ಆದೇಶ ಅನ್ವಯ ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಜೆಯ ನಕಲಿ ಆದೇಶ ಸೃಷ್ಟಿಸಿದರೆ ಕ್ರಮ: ಜಿಲ್ಲೆಯ ಶಾಲೆಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂಬ ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿಂದೆ ಹೊರಡಿಸಿದ್ದ ಆದೇಶವನ್ನು ತಿದ್ದಿ ಈ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ. ಈ ರೀತಿ ನಕಲಿ ಆದೇಶ ಸೃಷ್ಟಿಸಿದವರ ಮೇಲೆ ಹಾಗೂ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗುವುದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಎಚ್ಚರಿಕೆ ನೀಡಿದ್ದಾರೆ.
ರಜೆಯ ನಕಲಿ ಆದೇಶ ಸೃಷ್ಟಿಸಿದರೆ ಎಫ್.ಐ.ಆರ್: ಡಿ.ಸಿ
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂಬ ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಹಿಂದೆ ಹೊರಡಿಸಿದ್ದ ಆದೇಶವನ್ನು ತಿದ್ದಿ ಈ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ. ಈ ರೀತಿ ನಕಲಿ ಆದೇಶ ಸೃಷ್ಟಿಸಿದವರ ಮೇಲೆ ಹಾಗೂ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗುವುದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.