ADVERTISEMENT

ಮಂಗಳೂರು | ದ್ವಿತೀಯ ಪಿಯು ಪರೀಕ್ಷೆ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 7:57 IST
Last Updated 29 ಫೆಬ್ರುವರಿ 2024, 7:57 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾ.22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದು, ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.